ಗಂಗಾ ಕಲ್ಯಾಣ ಯೋಜನೆ ಮತ್ತು ಸಾರಥಿ ಯೋಜನೆಗೆ ಅರ್ಜಿ ಆಹ್ವಾನ!
<Ganga Kalyana scheme> <how to apply Ganga Kalyan scheme> <how to apply Ganga Kalyana scheme in CSC>
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನ ವಿವಿಧ ಯೋಜನೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ಸಾಲ ಯೋಜನೆ, ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವತಂತ್ರ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗಳನುಸಾರ ಅರ್ಜಿ ಸಲ್ಲಿಸಲು ತಿಳಿಸಿದೆ.
ಅರ್ಹತೆಗಳು??
10ನೇ ತರಗತಿ, ದ್ವಿತೀಯ ಪಿ.ಯು.ಸಿ., ಡಿಪ್ಲೋಮ, ಪದವಿ, ಇಂಜಿನಿಯ- ರಿಂಗ್ ವ್ಯಾಸಂಗವನ್ನು ಪೂರ್ಣಗೊಳಿಸಿರಬೇಕು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾತಿ ಪಟ್ಟಿಯಲ್ಲಿ ನಮೂದಿಸಿದ ನಿಗಮದ ವ್ಯಾಪ್ತಿಗೆ ಒಳಪಡುವ ಜಾತಿಗಳಿಗೆ ಸೇರಿದವರಾಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 25 ವರ್ಷಗಳ ಒಳಗಿರಬೇಕು. ಪ್ರವರ್ಗ-1ಕ್ಕೆ ಸೇ- ವರಮಾನ, ಆದಾಯ ಮಿತಿ ಇರುವುದಿಲ್ಲ. ಪ್ರವರ್ಗ-2ಎ, 3ಎ ಮತ್ತು 3ಬಿಗೆ ಸೇರಿದ ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ, ಆದಾಯ 8 ಲಕ್ಷ ರೂಗಳಿಗಿಂತ ಕಡಿಮೆ https://www.kaushalkar.com/ ಜಾಲತಾಣದೊಂದಿಗೆ ಅರ್ಜಿ ಹಾಕಿ.
ಹೊಲಿಗೆ ಯಂತ್ರ ವಿತರಣೆ ಯೋಜನೆ?
ಹಿಂದುಳಿದ ವರ್ಗಗಳ ಬಡ ಕುಟುಂಬದವ- ರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ ಯೋಜನೆಯಲ್ಲಿ ವಿಶ್ವಕರ್ಮ, ಉಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗಲಿಂಗಾಯತ, ಕಾಡುಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗುತ್ತದೆ.
ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡಲ್ಲಿರುವಂತೆ ಅರ್ಜಿದಾರರ ಹೆಸರು, ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. 2023-24ನೇ ಸಾಲಿನಲ್ಲಿ ಅರ್ಜಿಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಪಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಸೆನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ನಿಗಮದ ವೆಬ್‌ಸೈಟ್ www.dbcdc.karnataka.gov.in ಇಲ್ಲಿ ಅಗಸ್ಟ್ 31 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ತಾಲ್ಲೂಕ ಕಛೇರಿ, 1ನೇ ಮಹಡಿ, ರೂಮ್ ನಂ:04, ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನು ಓದಿ:ರೈತರೇ ಕರೆಂಟ ಸಮಸ್ಯೆ ಆಗುತ್ತಿದೆಯೇ? ಹಾಗಿದ್ದರೆ ನೀವು ಈಗ ಅರ್ಜಿ ಹಾಕಿ ಸಹಾಯಧನದಲ್ಲಿ ಸೋಲಾರ್ ಪಂಪ್ ಪಡೆಯರಿ
https://krushisanta.com/Application-invited-for-solar-scheme-in-Karnataka
ಇದನ್ನು ಓದಿ:ಈ ರೈತರ ಖಾತೆಗೆ ಹಳ್ಳಿವಾರು ಬೆಳೆ ಪರಿಹಾರ ಜಮಾ ಆಗಿಲ್ಲ ಈ ಪಟ್ಟಿಯನ್ನು ಗ್ರಾಮ ಲೆಕ್ಕಾಧಿಕಾರಿಗಳು ಗ್ರಾಮ ಪಂಚಾಯಿತಿಯಲ್ಲಿ ಪ್ರಕಟ ಮಾಡಿದ್ದಾರೆ ಬೇಗನೆ ದಾಖಲೆಗಳು ಸಲ್ಲಿಸಿ ನೀವು ಕೂಡ ಬೆಳೆ ಪರಿಹಾರ ಪಡೆಯಿರಿ
ಇದನ್ನು ಓದಿ:ಹೊಸದಾಗಿ ಅಪ್ಡೇಟ್ ಆಗಿರುವ ನಿಮ್ಮ ಜಮೀನಿನ ಆಕಾರಬಂಧ ಸರ್ವೇ ನಂಬರ್ ಹಾಕಿ ಡೌನ್ಲೋಡ್ ಮಾಡಿಕೊಳ್ಳಿ
https://krushisanta.com/How-to-download-land-Akaraband-in-Mobile
ಇದನ್ನು ಓದಿ:ರೈತರಿಗೆ ಸಬ್ಸಿಡಿಯಲ್ಲಿ ಟ್ರ್ಯಾಕ್ಟರ್ ಟ್ರೋಲಿ ನೀಡಲು! ಅರ್ಜಿ ಸಲ್ಲಿಸಿ ಸಹಾಯಧನ ಪಡೆಯಿರಿ ಮತ್ತು ಹತ್ತು ವರ್ಷಗಳ ವಾರಂಟಿ ನಿಮಗೆ ಯಾವ ರೀತಿ ಬೇಕೋ ಅದೇ ರೀತಿ ಮಾಡಿಸಿ