ಉಚಿತ ಹತ್ತು ದಿನಗಳ ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ!

<ಕೋಳಿ ಸಾಕಾಣಿಕೆ ತರಬೇತಿ> < ಉಚಿತ ತರಬೇತಿ> < ಉಚಿತ ಪಶುಪಾಲನಾ> <ತರಬೇತಿ ಉಚಿತ ಕೋಳಿ ಸಾಕಾಣಿಕೆ ತರಬೇತಿ> <10 ದಿನಗಳ ಉಚಿತ ಕೋಳಿ ಸಾಕಾಣಿಕೆ ತರಬೇತಿ>

Oct 14, 2024 - 15:10
 0
ಉಚಿತ ಹತ್ತು ದಿನಗಳ ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ!

ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ ಕೆನರಾ ಬ್ಯಾಂಕ್ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕೋಳಿ ಸಾಕಾಣಿಕೆ ಕುರಿತ 10 ದಿನಗಳ ಉಚಿತ ತರಬೇತಿಯು ಅರ್ಜಿ ಆಹ್ವಾನಿಸಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ- ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು.

ಅಭ್ಯರ್ಥಿಗಳು ಆದಾರ್ ಕಾರ್ಡ್‌ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 25 ಕೊನೆಯ ದಿನವಾಗಿದೆ.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, 9380162042 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನು ಓದಿ:ಬೆಳೆ ವಿಮಾ ಬಿಡುಗಡೆ! ರೈತರಿಗೆ 101 ಕೋಟಿ ಜಮಾ ಮತ್ತೆ ಹಣ ಬಂತು ನೋಡಿ

https://krushisanta.com/101-crore-crop-insurance-amount-credited

ಇದನ್ನು ಓದಿ:17 ನೇ ಕಂತು ಇಂದು ರೈತರ ಖಾತೆಗೆ ಜಮಾ! ಹಣ ಜಮಾ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ

https://krushisanta.com/How-to-check-pm-Kisan-beneficiary-status-in-mobile

ಇದನ್ನು ಓದಿ:ಜಮಾ ಆಗಿರುವ! ಪಿಎಂ ಕಿಸಾನ್ ರೈತರ ಲಿಸ್ಟ್ ಬಿಡುಗಡೆ

https://krushisanta.com/Pm-kisan-village-dashboard-list

admin B.Sc(hons) agriculture College of agriculture vijayapura And provide consultant service