ಅಂಗನವಾಡಿ ಸಹಾಯಕಿ ಕಾರ್ಯಕರ್ತೆಯರ ಹುದ್ದೆಗೆ ನೇರ ನೇಮಕಾತಿ ಅರ್ಜಿ ಆಹ್ವಾನ!
<ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ನೇರ ನೇಮಕಾತಿ> < application invited for Anganwadi workers> < application invited for Anganwadi workers>
ಗೋಕಾಕ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿ ಇರುವ 03 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 10 ಸಹಾಯಕಿಯರ ಹುದ್ದೆಗಳಿಗೆ 19-35 ವರ್ಷದೊಳಗಿನ ಅರ್ಹ ಮಹಿಳಾ ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಆನಲೈನ (Online) ಮುಖಾಂತರ ಅರ್ಜಿ ಕರೆಯಲಾಗಿದೆ.
ಅರ್ಜಿ ಸಲ್ಲಿಸಲು ಪ್ರಾರಂಭ ದಿ ಜುಲೈ 5 ರಂದು ಆರಂಭ ಕೊನೆಯ ದಿ ಅಗಸ್ಟ 4 ಆಗಿರುತ್ತದೆ. ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ದೃಢೀಕರಿಸಿದ ಅಗತ್ಯ ದಾಖಲೆಗಳೊಂದಿಗೆ ಆನಲೈನಲ್ಲಿ ಸಲ್ಲಿಸಬಹುದಾಗಿದೆ. ವಿವರವಾದ ಅಧಿಸೂಚನೆ (ಪ್ರಕಟಣೆ)ಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಗೋಕಾಕನ ನೋಟಿಸ ಬೋರ್ಡಿನ ಮೇಲೆ ಹಾಗೂ ಉ.ಬೆಣಚಿನಮರಡಿ, ಮದವಾಲ, ಖನಗಾಂವ, ಮಿಡಕನಟ್ಟಿ, ಹಿರೇನಂದಿ, ತವಗ, ಮಮದಾಪೂರ ಹಾಗೂ ಬೆಣಚಿನಮರಡಿ ಗಳ ಗ್ರಾಮ ಪಂಚಾಯತ ಕಛೇರಿ ಹಾಗೂ ಸಂಬಂಧಿಸಿದ ಪ್ರಾಥಮಿಕ ಶಾಲೆ/ಅಂಗನವಾಡಿ ಕೇಂದ್ರಗಳ ನೋಟಿಸ ಬೋರ್ಡಿನ ಮೇಲೆ ಪ್ರಕಟಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಲಕ್ಷ್ಮೀದೇವಿ ಗುಡಿ ದೂರವಾಣಿ ಸಂಖ್ಯೆ ರೋಡ ಗೋಕಾಕ. 08332-226365 ಇವರನ್ನು ರಜಾ ದಿನಗಳನ್ನು ಹೊರತುಪಡಿಸಿ ಕಛೇರಿ ವೇಳೆಯಲ್ಲಿ ಸಂಪರ್ಕಿಸಲು ಕೋರಿದೆ. ಅರ್ಜಿ ಸಲ್ಲಿಸಲು ಆನಲೈನ ವಿಳಾಸ https://karnemakaone.kar.nic.in/abcd/
ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಆಯ್ಕೆಯ ಮಾನದಂಡಗಳು
ಅರ್ಹತೆ: ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
11. ವಯೋಮಿತಿ:
ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು 19-35 ವರ್ಷ ವಯೋಮಿತಿಯೊಳಗಿನ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ಯ ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸಬಹುದು ಹಾಗೂ ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.
III. ಸ್ಥಳೀಯತೆ:
1. ಗ್ರಾಮಾಂತರ ಪ್ರದೇಶದ ಅಂಗನವಾಡಿ ಕೇಂದ್ರವಾದಲ್ಲಿ ಆಯಾ ಕಂದಾಯ ಗ್ರಾಮದಲ್ಲಿ ವಾಸ್ತವ್ಯ ಹೊಂದಿರಬೇಕು. ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಆಯ್ಕೆಗೆ ಸ್ಥಳೀಯ ಮಜಿರೆ, ತಾಂಡಾ ಹಾಗೂ ಹಾಡಿಗೆ ಸೇರಿದವರಾಗಿದ್ದರೆ ಸಂಬಂಧಿಸಿದ ವಾಸ್ತವ್ಯ ಪ್ರಮಾಣ ಪತ್ರವನ್ನು ಸಕ್ರಮ ಪ್ರಾಧಿಕಾರದಿಂದ ಪಡೆಯುವುದು.
2. ನಗರ ಪ್ರದೇಶದ ಅಂಗನವಾಡಿ ಕೇಂದ್ರವಾದಲ್ಲಿ ಆಯಾ ಕಂದಾಯ ವಾರ್ಡ್ನಲ್ಲಿ ವಾಸ್ತವ್ಯ ಹೊಂದಿರಬೇಕು ಹಾಗೂ ವಾಸ್ತವ್ಯ ಪ್ರಮಾಣ ಪತ್ರವನ್ನು ಸಕ್ಷಮ ಪ್ರಾಧಿಕಾರದಿಂದ ಪರಿಗಣಿಸುವಂತಿಲ್ಲ. ಪಡೆದಿರಬೇಕು. [ಚುನಾವಣಾ ವಾರ್ಡ್‌ಗಳನ್ನು
3. ತಹಶೀಲ್ದಾರ್ / ಉಪ ತಹಶೀಲ್ದಾರ್‌ರವರ ಮೂರು ವರ್ಷದ ವಾಸ್ತವ್ಯ ದೃಢೀಕರಣದೊಂದಿಗೆ ಸ್ಥಳೀಯರು ಎಂಬುದನ್ನು ದೃಢೀಕರಿಸಲು ಪೂರಕ ದಾಖಲೆಗಳಾಗಿ ಆಧಾರ ಕಾರ್ಡ್, ರೇಷನ್ ಕಾರ್ಡ್ ಮತದಾರರ ಗುರುತಿನ ಚೀಟಿಗಳನ್ನು ಪಡೆಯುವುದು. ಮಜಿರೆ, ತಾಂಡಾ ಹಾಗೂ ಹಾಡಿಗೆ ಸೇರಿದವರಾಗಿದ್ದರೆ ಸಂಬಂಧಿಸಿದ ವಾಸ್ತವ್ಯ ಪ್ರಮಾಣ ಪತ್ರ ಪಡೆಯುವುದು.
IV. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ವಿದ್ಯಾರ್ಹತೆ:-
1. 2, P.U.C. ತೇರ್ಗಡೆ ಹೊಂದಿರಬೇಕು. S.S.LC.ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
2. ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ ಸಂದರ್ಭದಲ್ಲಿ "ಸರ್ಕಾರದ ಅಂಗೀಕೃತ ಸಂಸ್ಥೆಗಳಿಂದ D.S.E.R.T.ಯಿಂದ ECCE ಡಿಪ್ಲೊಮಾ ಕೋರ್ಸ್, JOC ಕೋರ್ಸ್, N.T.T. ಕೋರ್ಸ್‌ಗಳನ್ನು ಹಾಗೂ ಅಂಗನವಾಡಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಡಿಪ್ಲೊಮಾ ನ್ಯೂಟ್ರಿಷಿಯನ್, ಹೋಂ ಸೈನ್ಸ್ ಸರ್ಟಿಫಿಕೇಟ್ ಕೋರ್ಸ್, ಒಂದು ವರ್ಷದ ನರ್ಸರಿ ಅಥವಾ ಪೂರ್ವ ಪ್ರಾಥಮಿಕ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿದವರಿಗೆ ಮೊದಲ ಆದ್ಯತೆ ನೀಡುವುದು ಹಾಗೂ ಸದರಿಯವರಿಗೆ ಬೋನಸ್ +5 ಅಂಕಗಳನ್ನು ನೀಡುವುದು.
V. ಅಂಗನವಾಡಿ ಸಹಾಯಕಿ ವಿದ್ಯಾರ್ಹತೆ:- ಹುದ್ದೆಗೆ ಕನಿಷ್ಟ ವಿದ್ಯಾರ್ಹತೆ SSLC ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣವಾಗಿರಬೇಕು.
ಅ) ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಮುಕ್ತ ಶಾಲೆ/ಮುಕ್ತ ವಿದ್ಯಾಲಯಗಳಲ್ಲಿ S.S.LC. ತೇರ್ಗಡೆ ಹೊಂದಿದ ಅಭ್ಯರ್ಥಿಗಳು ಪ್ರಥಮ/ದ್ವಿತೀಯ ಭಾಷೆಯಾಗಿ ಕನ್ನಡ ಹಾಗೂ ಸಾಮಾನ್ಯ ಗಣಿತ ಮತ್ತು ಸಮಾಜ ಶಾಸ್ತ್ರ/ಸಮಾಜ ವಿಜ್ಞಾನ ವಿಷಯಗಳನ್ನು ಕಡ್ಡಾಯವಾಗಿ ವ್ಯಾಸಂಗ ಮಾಡಿದ್ದು ಪ್ರಮಾಣ ಪತ್ರ/ಅಂಕಪಟ್ಟಿಯು ಗರಿಷ್ಟ 625 ಕನಿಷ್ಠ 219 ಅಂಕಗಳನ್ನು ಪರಿಗಣಿಸತಕ್ಕದ್ದು. ಹೊಂದಿದ್ದಲ್ಲಿ ಅಂತಹ ಅಭ್ಯರ್ಥಿಗಳನ್ನು
ಆ) ಬೇರೆ ರಾಜ್ಯಗಳಲ್ಲಿ ವ್ಯಾಸಂಗ ಮಾಡಿದ್ದು, ಕನ್ನಡವನ್ನು ಪ್ರಥಮ/ದ್ವಿತೀಯ ಭಾಷೆಯಾಗಿ ಅಭ್ಯಾಸ ಮಾಡಿದ್ದರೂ SSLC ಪರೀಕ್ಷೆಗೆ ಆ ರಾಜ್ಯದಲ್ಲಿ ನಿಗದಿಪಡಿಸಿದ ಗರಿಷ್ಠ ಹಾಗೂ ಕನಿಷ್ಟ ಅಂಕಗಳು ಹಾಗೂ ಕರ್ನಾಟಕ ರಾಜ್ಯದಲ್ಲಿ ನಿಗದಿಪಡಿಸಿದ ಗರಿಷ್ಟ ಹಾಗೂ ಕನಿಷ್ಟ ಅಂಕದಲ್ಲಿ ವ್ಯತ್ಯಾಸವಿದ್ದಲ್ಲಿ ಕರ್ನಾಟಕದಲ್ಲಿ ವ್ಯಾಸಂಗ ಮಾಡಿದ ಅಭ್ಯರ್ಥಿಗಳನ್ನು ಮಾತ್ರ ಪರಿಗಣಿಸತಕ್ಕದ್ದು.
ಇ) ಅಂಗನವಾಡಿ ಸಹಾಯಕಿಯರು ಯಾವುದೇ ಭಾಷಾ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ್ದರೂ ಹಾಗೂ ಯಾವುದೇ ರಾಜ್ಯದಲ್ಲಿ ವ್ಯಾಸಂಗ ಮಾಡಿದ್ದರೂ ಸಹಾ ಅವರು ಕನ್ನಡ ಭಾಷೆಯನ್ನು ಪ್ರಥಮ /ದ್ವಿತೀಯ ಭಾಷೆಯಾಗಿ ವ್ಯಾಸಂಗ ಮಾಡಿರಬೇಕು. ಹಾಗೂ ಮಾತೃಭಾಷೆ ಕನ್ನಡವಲ್ಲದೇ ಇರುವ ಅಭ್ಯರ್ಥಿಗಳಿಗೆ ಆಯ್ಕೆ ಸಮಿತಿಯು ಆಯ್ಕೆ ಸಮಯದಲ್ಲಿ ಸಂದರ್ಶನ ಏರ್ಪಡಿಸಿ ಹಾಗೂ ಅವಶ್ಯವಿದ್ದಲ್ಲಿ ಕನ್ನಡ ಭಾಷೆಯ ಜ್ಞಾನದ ಕುರಿತಂತೆ ಓದಿಸಿ, ಬರೆಸಿ ಅವರ ಕನ್ನಡ ಭಾಷಾ ಜ್ಞಾನವನ್ನು ಪರೀಕ್ಷಿಸಿ ಅವರನ್ನು ಆಯ್ಕೆ ಮಾಡುವ ಬಗ್ಗೆ ಸಮಿತಿಯವರು ನಿರ್ಧರಿಸುವುದು.
ಆನ್ ಲೈನ್ ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು:-
1. ಅರ್ಜಿ ನಿಗದಿತ ನಮೂನೆಯಲ್ಲಿ (ಆನ್ ಲೈನ್)
2. ಜನನ ಪ್ರಮಾಣ ಪತ್ರ/ಜನ್ಮ ದಿನಾಂಕ ಇರುವ S.S.L.C.ಅಂಕಪಟ್ಟಿ.
3. ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ.
4. ತಹಶೀಲ್ದಾರರು/ಉಪ ತಹಶೀಲ್ದಾರರಿಂದ ಪಡೆದ ಮೂರು. 3. ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ.
5. ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ.
6. ಪತಿಯ ಮರಣ ಪ್ರಮಾಣ ಪತ್ರ ಹಾಗೂ ವಿಧವಾ ಪ್ರಮಾಣ ಪತ್ರ (ವಿಧವಾ ವೇತನದ ದೃಢಿಕರಣವನ್ನು ಪರಿಗಣಿಸುವಂತಿಲ್ಲ).
7. ಅಂಗವಿಕಲತೆ ಪ್ರಮಾಣಪತ್ರ (ಅಂಗವಿಕಲ ವೇತನದ ದೃಢೀಕರಣವನ್ನು ಪರಿಗಣಿಸುವಂತಿಲ್ಲ).
8. ವಿಚ್ಛೇದನ ಪ್ರಮಾಣ ಪತ್ರ (ನ್ಯಾಯಾಲಯದಿಂದ ಪಡೆದಿರಬೇಕು.
) 9. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ನಡೆಸಲ್ಪಟ್ಟ ಮಾಜಿ ದೇವದಾಸಿಯರ ಸಮೀಕ್ಷೆಯ ಪಟ್ಟಿಯಲ್ಲಿರುವ ಮಾಜಿ ದೇವದಾಸಿಯರ ಮಕ್ಕಳು ಎಂಬುದರ ಬಗ್ಗೆ ಮಹಿಳಾ ಅಭಿವೃದ್ಧಿ ನಿಗಮದ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ.
10. ಇಲಾಖೆಯ ಸುಧಾರಣಾ ಸಂಸ್ಥೆ /ರಾಜ್ಯ ಮಹಿಳಾ ನಿಲಯಗಳ ನಿವಾಸಿಗಳು ಕನಿಷ್ಕೃಷ್ಟ 3 ವರ್ಷ ಸಂಸ್ಥೆಯಲ್ಲಿರಬೇಕು. ಹಾಗೂ ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಂದ ಪಡೆದ ನಿವಾಸಿ ಪ್ರಮಾಣ ಪತ್ರ.
11. ಯೋಜನಾ ನಿರಾಶ್ರಿತರ ಬಗ್ಗೆ ತಹಶೀಲ್ದಾರರಿಂದ ಪಡೆದ ಪ್ರಮಾಣ ಪತ್ರ.
12. ಆಧಾರ್ ಕಾರ್ಡ್/ಮತದಾರರ ಗುರುತಿನ ಚೀಟಿ/ರೇಷನ್ ಕಾರ್ಡ್/ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಪಡೆದ ದೃಢೀಕರಣ ಪತ್ರ.
13. ಎಲ್ಲಾ ದಾಖಲಾತಿಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಣ ಮಾಡಿಸಿ ಸಲ್ಲಿಸುವುದು.
ಇದನ್ನು ಓದಿ:ಇಲಾಖೆಯಿಂದ ಯಾಂತ್ರಿಕರಣ ಯೋಜನೆಯೆಲ್ಲಿ ಅರ್ಜಿ! ಜುಲೈ 30ರ ಒಳಗೆ ಅರ್ಜಿ ಸಲ್ಲಿಸಿದವರಿಗೆ ಸಿಗಲಿದೆ ಟ್ರ್ಯಾಕ್ಟರ್ ಅಥವಾ ಪವರ್ ಟಿಲ್ಲರ್
https://krushisanta.com/Application-invited-from-National-Horticulture-mission
ಇದನ್ನು ಓದಿ:ಎಲ್ಲಾ ರೈತರಿಗೂ ಬರ ಪರಿಹಾರ ಹಣ ಜಮಾ? ನಿಮಗೂ ಬಂತಾ ಸರ್ವೆ ನಂಬರ್ ಹಾಕಿ ಚೆಕ್ ಮಾಡಿ
https://krushisanta.com/Completely-drought-Parihar-hana-is-released-please-check-now-this-using-link
ಇದನ್ನು ಓದು:ತೆರೆದ ಬಾವಿ or ಬಾವಿ ಕೊರೆಸಲು 2.5 ಲಕ್ಷ ಆರ್ಥಿಕ ನೆರವು ನೀಡಲು ಅರ್ಜಿ ಆಹ್ವಾನ
https://krushisanta.com/Application-invited-for-open-well--drilling-in-Karnataka
ಇದನ್ನು ಓದಿ:ಇಲ್ಲಿಯವರೆಗೆ ಇನ್ನೂ ಪೆಂಡಿಂಗ್ ಉಳಿದಿರುವ ಜಮೀನಿಗೆ ಪಹಣಿಪತ್ರ ಲಿಂಕ್ ಆಗಿರುವುದಿಲ್ಲ? ನಿಮ್ಮ ಹೆಸರು ಚೆಕ್ ಮಾಡಿ
https://krushisanta.com/These-Farmers-are-pending-with-linking-of-Aadhaar-to-RTC