ರಾಜ್ಯ ಸರ್ಕಾರದಿಂದ ಪರೀಕ್ಷೆ ಮಾಡಿದ ನಂತರ! ರದ್ದ ಆಗದೇ ಇರುವ ಬಿಪಿಎಲ್ ಕಾರ್ಡ್ ಪಟ್ಟಿ!

<ರಾಜ್ಯದ ಪ್ರಸ್ತುತ ಬಿಪಿಎಲ್ ಕಾರ್ಡ್ ಪಟ್ಟಿ > < ರಾಜ್ಯದಲ್ಲಿ ಪ್ರಸ್ತುತವಾಗಿ ಚಾಲ್ತಿಯಲ್ಲಿರುವ ಬಿಪಿಎಲ್ ಕಾರ್ಡ್ ಪಟ್ಟಿ ಬಿಡುಗಡೆ>

Dec 14, 2024 - 21:02
 0
ರಾಜ್ಯ ಸರ್ಕಾರದಿಂದ ಪರೀಕ್ಷೆ ಮಾಡಿದ ನಂತರ! ರದ್ದ ಆಗದೇ ಇರುವ ಬಿಪಿಎಲ್ ಕಾರ್ಡ್  ಪಟ್ಟಿ!

ಸರ್ಕಾರ ಯಾವುದೇ ಅರ್ಹ ಬಿಪಿಎಲ್ ಕುಟುಂಬದವರ ಪಡಿತರ ಚೀಟಿ ರದ್ದು ಪಡಿಸಿಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಸ್ಪಷ್ಟಪಡಿಸಿದರು.

ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ದಲ್ಲಿ ಗುರುವಾರ ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯಕ್ ರವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವ ಕೆ.ಹೆಚ್.ಮುನಿಯಪ್ಪ ನವರು ಸದನದಲ್ಲಿ ಉತ್ತರಿಸಿದರು.

ರಾಜ್ಯದಲ್ಲಿ ಬಿಪಿಎಲ್ ಪಡಿತರ ಚೀಟಿಗಳನ್ನು ಪಡೆಯುವ ಬಗ್ಗೆ 2017 ರಲ್ಲಿ ಮಾನದಂಡಗಳನ್ನು ರೂಪಿಸಲಾಗಿದೆ. ಇದರ ಅನ್ವಯ ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಮಂಡಳಿ, ನಿಗಮ, ಸ್ವಾಯತ್ತ ಸಂಸ್ಥೆಗಳ ನೌಕರರು ಬಿಪಿಎಲ್ "ಕಾರ್ಡ ಪಡೆಯುವಂತಿಲ್ಲ. ಇದರೊಂದಿಗೆ ಆದಾಯ ತೆರಿಗೆ, ಸೇವಾ ತೆರಿಗೆ, ಜಿಎಸ್‌ಟಿ, ವೃತ್ತಿ ತೆರಿಗೆ ಪಾವತಿಸುವಎಲ್ಲಾ ಕುಟುಂಬಗಳು ಸಹ ಬಿಪಿಎಲ್ ನಡಿ ಬರುವುದಿಲ್ಲ.

ಗ್ರಾಮೀಣ ಪ್ರದೇಶಗಳಲ್ಲಿ 3 ಹೆಕ್ಟ‌ರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ, ನಗರ ಪ್ರದೇಶಗಳಲ್ಲಿ 1,000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆ ಹೊಂದಿರುವವರು, ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದೆ ಕುಟುಂಬವನ್ನು ಹೊರತುಪಡಿಸಿ, ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವವರು, ಕುಟುಂಬದ ವಾರ್ಷಿಕ ಆದಾಯವು ರೂ. 1.20 ಲಕ್ಷಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳನ್ನು ಬಿಪಿಎಲ್ ಪಡಿತರ ಚೀಟಿಯಿಂದ ಹೊರಗಿಡಲಾಗುವುದು ಎಂದು ಸಚಿವ ಕೆ.ಹೆಚ್.ಮುನಿಯಪ ಹೇಳಿದರು. ಆರೋಗ್ಯಕ್ಕೆ ಸಂಬಂದಿಸಿದ ಕಾರ್ಡು ಆಯಾ ಜಿಲ್ಲೆಯ ಅಧಿಕಾರಿಗಳು ನೀಡುತ್ತಾರೆ. ಕೇಂದ್ರ ಸರ್ಕಾರದ ಮಾನದಂಡಗಳ ಅಡಿಯಲ್ಲಿಯೇ ಕಾರ್ಡ್ ಗಳನ್ನು ಪರಿಷ್ಕರಣೆ ಮಾಡಲಾಗಿದೆ. ಯಾವುದೇ ಅನಗತ್ಯ ಗೊಂದಲ ಬೇಡ. ರದ್ದಾದ ಆರೋಗ್ಯ ಸಂಬಂಧ ಬಿಪಿಎಲ್ ಕಾರ್ಡುಗಳನ್ನು ತಕ್ಷಣ ಪುನರ್ ಸ್ಥಾಪಿಸಲಾಗಿದೆ.

ಯಾವುದೇ ಅರ್ಹರಿಗೆಗೊಂದಲವಾಗದಂತೆ ಕಾರ್ಡ್ಗಳನ್ನು ವಿತರಿಸಲು ಅಧಿಕಾರಿಗಳಿಗೆ ವಿತರಿಸಲು ಸೂಚನೆ ನೀಡಿದ್ದೇನೆ ಎಂದು ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದರು. ಹೊಸ ಬಿಪಿಎಲ್ ಕಾರ್ಡ ವಿತರಿಸಲು ಕ್ರಮ: ಪೋಷಕರ ಆದಾಯ ಹೆಚ್ಚಿದ್ದರೂ, ಕುಟುಂಬದ ಸದಸ್ಯರು ಪ್ರತ್ಯೇಕವಾಗಿ ವಾಸವಿದ್ದು ಬಿಪಿಎಲ್ ಪಡಿತರ ಚೀಟಿ ಪಡೆಯಲು ಅರ್ಹರಿದ್ದಲ್ಲಿ ಪಡಿತರ ಚೀಟಿ ನೀಡಲು ಕ್ರಮವಹಿಸಲಾಗುವುದು. ಅರ್ಹ ಕುಟುಂಬ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ರಾಜ್ಯದಲ್ಲಿ 03 ಲಕ್ಷ ಕಾರ್ಡ್ಗಳನ್ನು ಪುನರ್ ಸ್ಥಾಪಿಸುವ ಕಾರ್ಯ ಮಾಡಲಾಗಿದೆ. ಆದಾಯ ತೆರಿಗೆ ಪಾವತಿಸುವ 98473 ಪಡಿತರ ಚೀಟಿಗಳು ಹಾಗೂ 4036 ಸರ್ಕಾರಿ ನೌಕರರು ಪಡೆದಿದ್ದ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲಾಗಿದೆ. ಅರ್ಹ ಯಾವುದೇ ಬಿಪಿಎಲ್ ಕಾರ್ಡಾರರಿಗೆ ತೊಂದರೆಯಾಗದಂತೆ ಈಗಾಗಲೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ.

ತಹಶೀಲ್ದಾರ್ ನೀಡುವ ಆದಾಯ ಪ್ರಮಾಣ ಪತ್ರ ಮತ್ತು ಇನ್ನಿತರೆ ದಾಖಲೆಗಳನ್ನು ಪಡೆದು ಸ್ಥಳ ಪರಿಶೀಲನೆ ಮಾಡಿ, ಹೊಸ ಬಿಪಿಎಲ್ ಕಾರ್ಡು ವಿತರಿಸಲು ಕ್ರಮ ವಹಿಸಲಾ ಗವುದು ಎಂದು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.

ಇದನ್ನು ಓದಿ:ರಾಜ್ಯದಲ್ಲಿ ವಾತಾವರಣ ಮುನ್ಸೂಚನೆ ಮಳೆ ಎಲ್ಲೆಲ್ಲಿ ಯಾವ ದಿನದಂದು ಬರಲಿದೆ ನೋಡಿ

https://krushisanta.com/Rain-fall-alert-and-climate-report-Karnataka-for-next-week

ಇದನ್ನು ಓದಿ:19ನೇ ಕಂತಿನ ಪಿಎಂ ಕಿಸಾನ್ ಹಣ ಅರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ!

https://krushisanta.com/Pm-Kisan-19th-installment-eligible-list

admin B.Sc(hons) agriculture College of agriculture vijayapura And provide consultant service