17ನೇ ತಾರೀಖಿನವರೆಗೆ ಈ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ!

<ಮಳೆ> <ಮಳೆ ಮುನ್ಸೂಚನೆ> <ಮಳೆ ವರದಿ> <ಮಳೆ ಮಾಹಿತಿ ಕರ್ನಾಟಕ>

Jul 14, 2024 - 09:35
 0
17ನೇ ತಾರೀಖಿನವರೆಗೆ ಈ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ!

ದಿನ 1 (13ನೇ ಜುಲೈ 2024): ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯ ವೇಗ ವು (40-50 ಕಿಮೀ) ತಲುಪುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯ ವೇಗವು (40-50 ಕಿಮೀ) ತಲುಪುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೆಳಗಾವಿ, ಕಲಬುರ್ಗಿ, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯ ವೇಗವು (30-40 ಕಿಮೀ) ತಲುಪುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯ ವೇಗವು (40-50 kmph) ತಲುಪುವ ಸಾಧ್ಯತೆಯಿದೆ

ದಿನ 2 (14ನೇ ಜುಲೈ 2024): ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀಯಿಂದ ಅತಿ ಭಾರೀ ಮಳೆ ಹಾಗೂ ಒಂದು ಅಥವಾ ಎರಡು ಸ್ಥಳಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯ ವೇಗ ವು (40-50 ಕಿಮೀ) ತಲುಪುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯು ವೇಗ (40-50 kmph) ತಲುಪುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಯಾದಗಿರಿ, ರಾಯಚೂರು, ಕಲಬುರ್ಗಿ, ಬೀದರ್, ಧಾರವಾಡ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೇಗವು (40-50 ಕಿಮೀ) ತಲುಪುವ ಸಾಧ್ಯತೆಯಿದೆ.

ದಿನ 3 (15ನೇ ಜುಲೈ, 2024) : ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀಯಿಂದ ಅತಿ ಭಾರೀ ಮಳೆ ಹಾಗೂ ಒಂದು ಅಥವಾ ಎರಡು ಸ್ಥಳಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯ ವೇಗವು (40-50 ಕಿಮೀ) ತಲುಪುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀಯಿಂದ ಅತಿ ಭಾರೀ ಮಳೆ ಹಾಗೊ ಒಂದು ಅಥವಾ ಎರಡು ಸ್ಥಳಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯ ವೇಗವು (30-40 ಕಿಮೀ) ತಲುಪುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಭಾರೀಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯು ವೇಗ (40-50 kmph) ತಲುಪುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯು ವೇಗ (30-40 kmph) ತಲುಪುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ವಿಜಯಪುರ, ಹಾವೇರಿ, ಬಾಗಕ್ಕೋಟೆ, ಕಲಬುರ್ಗಿ, ಬೀದರ್ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ . ನಿರಂತರ ಗಾಳಿಯ ವೇಗವು (40-50 ಕಿಮೀ) ತಲುಪುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ದಾವಣಗೆರೆ, ತುಂಕೂರ್, ಚಿತ್ರದುರ್ಗ, ಬಳ್ಳಾರಿ, ವಿಜಯನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯು ವೇಗ (30-40 kmph) ತಲುಪುವ ಸಾಧ್ಯತೆಯಿದೆ.

ದಿನ 4 (16ನೇ ಜುಲೈ 2024): ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯ ವೇಗ ವು (40-50 ಕಿಮೀ) ತಲುಪುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀಯಿಂದ ಅತಿ ಭಾರೀ ಮಳೆ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯ ವೇಗವು (30-40 ಕಿಮೀ) ತಲುಪುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ, ನಿರಂತರ ಗಾಳಿಯ ವೇಗವು (40-50 ಕಿಮೀ) ತಲುಪುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ದಾವಣಗೆರೆ, ಹಾಸನ ಮತ್ತು ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯು ವೇಗ (30-40 kmph) ತಲುಪುವ ಸಾಧ್ಯತೆಯಿದೆ.

ದಿನ 5 (17ನೇ ಜುಲೈ 2024): ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀಯಿಂದ ಅತಿ ಭಾರೀ ಮಳೆ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ, ಹಾವೇರಿ, ಧಾರವಾಡ, ಬೆಳಗಾವಿ ಮತ್ತು ಗದಗ ಹಾಗೂ ದಕ್ಷಿಣ ಒಳನಾಡಿನ ಹಾಸನ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಇದನ್ನು ಓದಿ:ಅಂಗನವಾಡಿ ಸಹಾಯಕ ಕಾರ್ಯಕರ್ತೆಯರ ಹುದ್ದೆಗೆ ನೇರ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನ

https://krushisanta.com/Application-invited-from-Anganwadi-workers

ಇದನ್ನು ಓದಿ:ಕುರಿ ಮತ್ತು ಮೇಕೆ ಸಾಕಾಣಿಕೆ ಮಾಡಲು ಸಹಾಯಧನ ನೀಡಲು ಅರ್ಜಿ ಆಹ್ವಾನ

https://krushisanta.com/Application-invited-for-sheep-and-Goat-shed

ಇದನ್ನು ಓದಿ:ಇಲಾಖೆಯಿಂದ ಯಾಂತ್ರಿಕರಣ ಯೋಜನೆಯೆಲ್ಲಿ ಅರ್ಜಿ! ಜುಲೈ 30ರ ಒಳಗೆ ಅರ್ಜಿ ಸಲ್ಲಿಸಿದವರಿಗೆ ಸಿಗಲಿದೆ ಟ್ರ್ಯಾಕ್ಟರ್ ಅಥವಾ ಪವರ್ ಟಿಲ್ಲರ್

https://krushisanta.com/Application-invited-from-National-Horticulture-mission

ಇದನ್ನು ಓದಿ:ಎಲ್ಲಾ ರೈತರಿಗೂ ಬರ ಪರಿಹಾರ ಹಣ ಜಮಾ? ನಿಮಗೂ ಬಂತಾ ಸರ್ವೆ ನಂಬರ್ ಹಾಕಿ ಚೆಕ್ ಮಾಡಿ

https://krushisanta.com/Completely-drought-Parihar-hana-is-released-please-check-now-this-using-link

admin B.Sc(hons) agriculture College of agriculture vijayapura And provide consultant service